9900 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ- RRB ALP recruitment 2025

9900 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ

RRB ALP ನೇಮಕಾತಿ 2025 – 9900 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ


ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) ಸುಮಾರು 9900 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಮಾಹಿತಿಯನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆ ಮತ್ತು ವೆಬ್ಸೈಟ್ ಲಿಂಕ್ ಅನ್ನು ಪರಿಶೀಲಿಸಿ.



  ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

  ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು. ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಅಮರ್ ಅಪ್ಡೇಟ್ಸ್ ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

   rrb alp recruitment 2025 – ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯ ಮೂಲಕ 9900 (ಸುಮಾರು) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ. rrb alp recruitment 2025


ಉದ್ಯೋಗ ವಿವರಗಳು
ಇಲಾಖೆ ಹೆಸರು      ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB)
ಹುದ್ದೆಗಳ ಹೆಸರು      ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು      9900
ಅರ್ಜಿ ಸಲ್ಲಿಸಿಕೆ      ಆನ್ಲೈನ್ (Online) 
ಉದ್ಯೋಗ ಸ್ಥಳ       ಭಾರತಾದ್ಯಂತ 

ಅರ್ಹತೆ:-

ಶೈಕ್ಷಣಿಕ ಅರ್ಹತೆ: 10ನೇ ತರಗತಿ ಉತ್ತೀರ್ಣತೆ + ಐಟಿಐ/ಡಿಪ್ಲೋಮಾ ಪಾಸಾದಿರಬೇಕು

ವಯೋಮಿತಿ: 18 ರಿಂದ 30 ವರ್ಷ (ಸರ್ಕಾರಿ ನಿಯಮಾನುಸಾರ ವಯೋಮಿತಿ ರಿಯಾಯಿತಿ)

ಅರ್ಜಿ ಶುಲ್ಕ:

ಸಾಮಾನ್ಯ/OBC/EWS: ಪ್ರಕಟಣೆ ಬಳಿಕ ತಿಳಿಸಲಾಗುವುದು

ಎಸ್ಸಿ/ಎಸ್ಟಿ/ಅಂಗವಿಕಲ/ಮಹಿಳೆಯರು: ಪ್ರಕಟಣೆ ಬಳಿಕ ತಿಳಿಸಲಾಗುವುದು

ಆಯ್ಕೆ ವಿಧಾನ:-

CBT ಹಂತ 1: ಕಂಪ್ಯೂಟರ್ ಆಧಾರಿತ ಪರೀಕ್ಷೆ

CBT ಹಂತ 2: ಕಂಪ್ಯೂಟರ್ ಆಧಾರಿತ ಪರೀಕ್ಷೆ

CBAT: ಕಂಪ್ಯೂಟರ್ ಆಧಾರಿತ ಅಕ್ಟಿಟ್ಯೂಡ್ ಪರೀಕ್ಷೆ

• ಮೂಲದಾಖಲೆ ಪರಿಶೀಲನೆ

• ಮೆಡಿಕಲ್ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ:-

ಅಧಿಕೃತ ವೆಬ್‌ಸೈಟ್ (www.indianrailways.gov.in) ಗೆ ಭೇಟಿ ನೀಡಿ.

ಅರ್ಜಿ ನಮೂನೆ ಭರ್ತಿ ಮಾಡಿ.

ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ಅರ್ಜಿ ಶುಲ್ಕ ಪಾವತಿಸಿ.

ಅರ್ಜಿಯನ್ನು ಸಲ್ಲಿಸಿ ಹಾಗೂ ಪ್ರಿಂಟ್‌ಔಟ್ ತೆಗೆದುಕೊಳ್ಳಿ.


RRB-ALP-2025-Short-Notification


ಪ್ರಮುಖ ದಿನಾಂಕಗಳು:- 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಶೀಘ್ರದಲ್ಲೇ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಶೀಘ್ರದಲ್ಲೇ


                ಧನ್ಯವಾದಗಳು 🙏❤️





 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು